17ರಂದು ವಿದ್ಯುತ್ ಜನಸಂಪರ್ಕ ಸಭೆ

Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಜೂ. 17ರಂದು ಜನಸಂಪರ್ಕ ಸಭೆಯನ್ನು ನಿಗದಿಪಡಿಸಲಾಗಿದೆ.

ಜೂ. 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೇಗೂರು ಉಪವಿಭಾಗ ಹಾಗೂ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ಗುಂಡ್ಲುಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳಿದ್ದಲ್ಲಿ ಸಭೆಗೆ ತಿಳಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net