17ರಂದು ವಿಶ್ವಕರ್ಮ ಜಯಂತಿ

vishwakarma download
Published on

ಬೆಳಗಾವಿ: ಸರ್ಕಾರದ ನಿರ್ದೇಶನದಂತೆ ವಿಶ್ವಕರ್ಮ ಜಯಂತಿಯನ್ನು ಸೆ.17ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಆಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವಕರ್ಮ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಅದರಂತೆ ಎಲ್ಲ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಕಾರ್ಯಕ್ರಮ ಆಯೋಜಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾಮಟ್ಟದಲ್ಲಿ ಜರುಗಲಿರುವ ಕಾರ್ಯಕ್ರಮಕ್ಕೂ ಮುನ್ನ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆಯನ್ನು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ಪಾಲ್ಗೊಳ್ಳುವಂತೆ ಕ್ರಮ ವಹಿಸಲು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ರಮೇಶ ದೇಸೂರಕರ, ಮಂಜುನಾಥ ಬಡಿಗೇರ, ಕೆ.ಬಿ.ಸಾವಗಾಂವ, ಎ.ಕೆ.ಸುತಾರ, ಮಂಜುಳಾ ಸಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net