

ಚಿತ್ರದುರ್ಗ: ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ನಗರಸಭೆ ಹಾಗೂ ವಿವಿಧ ವಿಶ್ವಕರ್ಮ ಸಂಘಟನೆಗಳ ಸಹಯೋಗದಲ್ಲಿ ಸೆ.17 ರಂದು ವಿಶ್ವಕರ್ಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿ ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ವಿಶ್ವ ಕರ್ಮ ಸಮುದಾಯದ ಎಲ್ಲ ಭಾಂದ ವರು ಜಯಂತಿಯಲ್ಲಿ ಭಾಗವಗಹಿಸಬೇಕು. ಉಪನ್ಯಾಸ ಹಾಗೂ ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 9.30ಕ್ಕೆ ನಗರ ದ ಬುರಜಹಟ್ಟಿ ಆಂಜನೇಯ ದೇವಸ್ಥಾನದಿಂದ ರಂಗಮಂದಿರದವರೆಗೆ ವಿಶ್ವಕರ್ಮರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಮಧ್ಯಾಹ್ನ 12 ಗಂಟೆಗೆ ರಂಗ ಮಂದಿರಲ್ಲಿ ವೇದಿಕೆ ಕಾರ‌್ಯಕ್ರಮ ಜರುಗಲಿದೆ ಎಂದ ರು.
ಉಪವಿಭಾಗಧಿಕಾರಿ ಎಂ.ಕಾರ್ತಿಕ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ,ಪೊಲೀಸ್ ನಿ ರೀಕ್ಷಕ ಗುಡ್ಡಪ್ಪ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್,ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.