18 ರಂದು ಅಂಬೇಡ್ಕರ್ ಜಯಂತಿ, ನೌಕರರ ಸಮಾವೇಶ

Simple celebration of Dr. Ambedkar Jayanti
ಡಾ.ಬಿ.ಆರ್​. ಅಂಬೇಡ್ಕರ್​
Published on
ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿ ಮೇ 18ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ನೌಕರರ ಸ್ವಾಭಿಮಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರಿ ಎಸ್.ಸಿ/ಎಸ್.ಟಿ. ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸಮಾವೇಶ ಉದ್ಘಾಟಿಸುವರು. ಸಂಸದ ಶ್ರೇಯಸ್ ಪಟೇಲ್ ಉಪಸ್ಥಿತರಿರುವರು. ನಾಡೋಜ ಬರಗೂರು ರಾಮಚಂದ್ರಪ್ಪ ದಿಕ್ಸೂಚಿ ಭಾಷಣ ಮಾಡುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದ ಅವರು, ರಾಜ್ಯದಲ್ಲಿ ಒಳ ಮೀಸಲಾತಿ ಸಮೀಕ್ಷೆ ನಡೆಯುತ್ತಿರುವುದು ಸ್ವಾಗತಾರ್ಹ. ಆದರೆ ಇದು ಒಗ್ಗೂಡಬೇಕೇ ಹೊರತು, ಒಡೆಯುವಂತಾಗಬಾರದು ಎಂದರು. ದತ್ತಾಂಶ ಸಂಗ್ರಹ ರೀತಿ ನೋಡಿದರೆ ಆತಂಕ ಆಗುತ್ತಿದೆ. ಹಾಗಾಗದಂತೆ ವೈಜ್ಞಾನಿಕವಾಗಿ ನಡೆಯಲಿ ಎಂದು ಆಶಿಸಿದರು. ಒಳ ಮೀಸಲಾತಿ ಜಾರಿಯಾದ ನಂತರವೇ ಬ್ಯಾಕ್‌ಲಾಗ್ ಹುದ್ದೆ ನೇಮಕ ಆಗಬೇಕು. ಸರ್ಕಾರ ಜಾರಿಗೊಳಿಸಿರುವ ವಿವಿಧ ಜನಪರ, ಸಮುದಾಯ ಪರ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನ ಆಗಬೇಕಾದರೆ ಕಾರ್ಯಾಂಗ ಸದೃಢ ಆಗಬೇಕೆಂದರು.
ಇದೇ ವೇಳೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಸುಮಾರು ೮೦ ಸಾವಿರ ಹುದ್ದೇ ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ನೌಕರರ ಸಮಾವೇಶದಲ್ಲಿ ನಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಜಿಲ್ಲಾಧ್ಯಕ್ಷ ವೆಂಕಟೇಶ್ ದೇವಿಪುರ, ಹಿರಿಯ ಉಪಾಧ್ಯಕ್ಷ ಬಿ.ಎನ್. ಜಯರಾಂ, ರಂಗಸ್ವಾಮಿ, ಮಹೇಶ್, ಸಿದ್ದಯ್ಯ, ಶಿವಕುಮಾರ್ ಮೊದಲಾದವರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net