

ಮಂಡ್ಯ: ಮೆ.ರಾಜ್ ಬಯೋ ಆರ್ಗ್ಯಾನಿಕ್ ಮತ್ತು ಮೆ.ಬಿ.ಜೆಡ್ ಫಿನ್‌ಸರ್ವ್ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಜು.18ರಂದು ನಗರದ ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮೋ, ಐಟಿಐ ಮತ್ತು ಯಾವುದೇ ಪದವಿ ತೇರ್ಗಡೆಯಾದಂತಹ 18 ರಿಂದ 35 ವರ್ಷದೊಳಗಿನವರು 4 ಭಾವಚಿತ್ರ, ಸ್ವ ವಿವರದ ಪ್ರತಿ, ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅಂದು ಬೆಳಗ್ಗೆ 10 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ದೂ.ಸಂ 08232-295124 ಅಥವಾ ಮೊ.ಸಂ 8217803781 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಎನ್.ಆರ್.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.