

ಹಾಸನ: ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಕೆ.ಹಿರೀಹಳ್ಳಿ ಗ್ರಾಮದಲ್ಲಿ 2ನೇ ವರ್ಷದ ಶ್ರೀ ಆಂಜನೇಯಸ್ವಾಮಿ ಮತ್ತು ಶನೇಶ್ವರ ಜಾತ್ರೆ ಮತ್ತು ಉತ್ಸವವನ್ನು ಫೆ.18 ರಿಂದ 26ರ ವರೆಗೆ ಆಯೋಜಿಸಲಾಗಿದೆ ಎಂದು ಕಲಾವಿದ ವೆಂಕಟೇಶ್ ತಿಳಿಸಿದರು.
ಬಾರಿ ಅದ್ದೂರಿ ಜಾತ್ರಾ ಮಹೋತ್ಸವದ ಜತೆ ದನಗಳ ಜಾತ್ರೆಯನ್ನು ಆಯೋಜಿಸಲಾಗಿದ್ದು ನೂರಾರು ಜೋಡಿ ದನಗಳು ಜಾತ್ರೆಯಲ್ಲಿ ಭಾಗವಹಿಸಲಿದ್ದು ಅವುಗಳಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಉತ್ಸವಕ್ಕೆ ಸುತ್ತಮುತ್ತಲ ಗ್ರಾಮಸ್ಥರು ಸಹಕಾರ ನೀಡಿದ್ದು, ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಈ ವೇಳೆ ಗ್ರಾಮದ ಮುಖಂಡರಾದ ನಿಂಗರಾಜು, ಮುದ್ದುಕೃಷ್ಣ, ರವಿ, ಹುಚ್ಚೇಗೌಡ ಇತರರು ಉಪಸ್ಥಿತರಿದ್ದರು.