ಬೆಂಗಳೂರಿನಲ್ಲಿರುವ 19 ಕೆರೆಗಳಿಂದ ಯಾವುದೇ ಉಪಯೋಗವಿಲ್ಲ; ಆರಗ ಜ್ಞಾನೇಂದ್ರ ಮಾಹಿತಿ

lakes
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿರುವ 167 ಕೆರೆಗಳ ಪೈಕಿ 19 ಕೆರೆಗಳು ನಿರುಪಯುಕ್ತವಾಗಿವೆ ಎಂದು ವಿಧಾನಮಂಡಳದ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಕೆರೆಗಳ ಪುನಶ್ಚೇತನ ಕಾರ್ಯದಲ್ಲಿ ನಗರಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ, ಅರಣ್ಯ ಇಲಾಖೆ ಅಧಿಕಾರಿಗಳು ಪರಸ್ಪರ ಸಹಯೋಗದೊಂದಿಗೆ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೆರೆಗಳ ಬಫರ್ ಜೋನ್ ಲೆಕ್ಕಿಸದೆ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ. ಕೆರೆಗಳಿಗೆ ಮಣ್ಣನ್ನು ಸುರಿದು ಮುಚ್ಚಲಾಗುತ್ತಿದೆ. ಒತ್ತುವರಿ ಮಾಡಿರುವ ಕೆರೆಗಳ ಖಾಸಗಿ ಕಂಪನಿಗಳು ಮತ್ತು ಮಾಲೀಕರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಎರೆ ಮಲ್ಲಪ್ಪಚೆಟ್ಟಿ ಕೆರೆಯನ್ನು ಒಂದು ತಿಂಗಳೊಳಗೆ ಸರ್ವೆ ಮಾಡಿಸಿ ಒತ್ತುವರಿ ತೆರವು ಮಾಡಲು ಅಗತ್ಯ ಕ್ರಮ ಕೈಗೊಂಡು ವರದಿ ನೀಡುವುದಾಗಿ ಸಮಿತಿಗೆ ನೀರಾವರಿ ಇಲಾಖೆ ಕಾರ್ಯದರ್ಶಿ ಭರವಸೆ ನೀಡಿದ್ದಾರೆ ಎಂದರು.

ಹುಳಿಮಾವು ಕೆರೆ ದಂಡೆಯನ್ನು ಅಧಿಕಾರಿಗಳ ಬೇಜವಾಬ್ದಾರಿಯಿಂದ ಹೊಡೆದು ಹಾಕಲಾಗಿದೆ. ಇನ್ನು ಈ ಬಗ್ಗೆ ಯಾರ ಮೇಲೂ ಎಫ್​ಐಆರ್ ಆಗಿಲ್ಲ. ಈ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net