19 ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

19 Congress candidate nomination papers
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ನಾಗರಾಜ್ ಹದ್ಲಿ, ರಜಾಕ ಬೆನ್ನೂರ ಉಪಸ್ಥಿತರಿದ್ದರು.
Published on

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಏ.19 ರಂದು ಬಹಿರಂಗ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಿಂದ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಟಾಕೀಜ್, ಶಾರದಾ ಹೋಟೆಲ್, ಕಾಟನ್ ಮಾರ್ಕೇಟ್, ಬಸವೇಶ್ವರ ವೃತ್ತ, ಎಂ.ಜಿ.ರಸ್ತೆ ಮೂಲಕ ಟಾಂಗಾ ಸ್ಟ್ರಾೃಂಡ್, ಪಂಕಾ ಮಸೀದಿ, ಕೊತ್ತಲೇಶ್ವರ ದೇವಸ್ಥಾನ, ಹಳೇ ಪೋಸ್ಟ್ ಆಫೀಸ್, ಕೃಷ್ಣಾ ಟಾಕೀಜ್ ರೋಡ ಮೂಲಕ ಅಂಬೇಡ್ಕರ್ ವೃತ್ತ ತಲುಪಲಿದೆ ಎಂದರು.

ನಂತರ ನವಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಚುನಾವಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡುವರು. ಸಚಿವರಾದ ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಮಾಜಿ ಸಚಿವರು, ಹಾಲಿ ಶಾಸಕರು, ಮಾಜಿ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಮಹಿಳೆಯರಿಗೆ ಅಪಮಾನ ಮಾಡಿರುವುದನ್ನು ಕಾಂಗ್ರೆಸ್ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ. ಉಚಿತ ಬಸ್ ಪ್ರಯಾಣ, ಎರಡು ಸಾವಿರ ರೂ. ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳಾ ಕುಲಕ್ಕೆ ಕಾಂಗ್ರೆಸ್ ಗೌರವ ನೀಡಿದೆ. ಇದನ್ನು ರಾಜ್ಯದ ಮಹಿಳೆಯರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಕೆಟ್ಟ ಉದ್ದೇಶದಿಂದ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರಿಗೆ ಅಪಮಾನ ಮಾಡಿದ್ದು, ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಡಿಸಿಸಿ ಬ್ಯಾಂಕ ಅಧ್ಯಕ್ಷ ಅಜಯಕುಮಾರ ಸರನಾಯಕ, ನಾಗರಾಜ್ ಹದ್ಲಿ, ರಜಾಕ ಬೆನ್ನೂರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net