19 ರಿಂದ ಶಿವ ಸಂಚಾರ ನಾಟಕೋತ್ಸವ

ctd Tulabhara----3
Published on

ಚಿತ್ರದುರ್ಗ: ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕದಳಿ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಗರದ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ನ.19 ರಿಂದ 3 ದಿನಗಳ ಕಾಲ ಸಂಜೆ 6 ಗಂಟೆಗೆ ಕನ್ನಡ ರಾಜ್ಯೋತ್ಸವ, ಮಕ್ಕಳ ಕಲರವ ಮತ್ತು ಶಿವಸಂಚಾರ ನಾಟಕೋತ್ಸವ ಏರ್ಪಡಿಸಲಾಗಿದೆ. 19 ರಂದು ಬಿ.ಆರ್.ಪೊಲೀಸ್ ಪಾಟೀಲ್ ರಚಿತ ನಾಟಕ ತುಲಾಭಾರ ವಿಶ್ವೇಶ್ವರಿ ಹಿರೇಮಠ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರದ ಕಲಾವಿದರು ಅಭಿನಯಿಸಲಿದ್ದಾರೆ.

20 ರಂದು ಟಿ.ಕೆ.ರಾಮರಾವ್ ಮೂಲ ಕಾದಂಬರಿ, ಗಣೇಶ ಅಮೀನಗಡ ನಾಟಕಕ್ಕೆ ರೂಪಾಂತರಿಸಿರುವ, ವೈ.ಡಿ.ಬದಾಮಿ ನಿರ್ದೇಶನದ ಬಂಗಾರದ ಮನುಷ್ಯ ನಾಟಕ ಪ್ರದರ್ಶನ ನಡೆಯಲಿದೆ. 21 ರಂದು ಸಂಜೆ 6 ಕ್ಕೆ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಚಿಸಿರುವ ಮಹಾದೇವ ಹಡಪದ ನಿರ್ದೇಶನದಲ್ಲಿ ಕೋಳೂರು ಕೊಡಗೂಸು ನಾಟಕ ಪ್ರದರ್ಶನವಾಗಲಿದೆ ಎಂದು ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ತಿಳಿಸಿದ್ದಾರೆ.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net