ಪಿರಿಯಾಪಟ್ಟಣ: ಪಿರಿಯಾಪಟ್ಟಣದಲ್ಲಿ ಜ.19ರಂದು ಆಯೋಜಿಸಿರುವ ಉದ್ಯೋಗ ಮೇಳವನ್ನು ಯುವಕ, ಯುವತಿಯರು ಸದುಪಯೋಗಪಡಿಸಿಕೊಳ್ಳುವಂತೆ ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜುಂಡ ನಂಜೇಗೌಡ ಮನವಿ ಮಾಡಿದರು.
ಮೈಸೂರು ಜಿಲ್ಲೆ ಸೇರಿದಂತೆ ಗ್ರಾಮೀಣ ಜನತೆ ಮತ್ತು ರೈತರ ಮಕ್ಕಳ ಅನುಕೂಲಕ್ಕಾಗಿ ನಮ್ಮ ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಉಚಿತ ಉದ್ಯೋಗ ಮೇಳ ಆಯೋಜಿಸಲಾಗಿದ್ದು ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ಈ ಮೇಳದಲ್ಲಿ ಪಾಲ್ಗೊಂಡು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆದಿಚುಂಚನಗಿರಿ ಮಠದ ಭೈರವೈಕ್ಯ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜಯಂತ್ಯುತ್ಸವದ ಅಂಗವಾಗಿ ಪಟ್ಟಣದ ಹರವೆ ಮಲ್ಲರಾಜಪಟ್ಟಣದಲ್ಲಿನ ವಿದ್ಯಾವಿಕಾಸ ಪಿಯು ಕಾಲೇಜು ಆವರಣದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ ಉತ್ತರಾಧಿಕಾರಿಗಳಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆದಿಚುಂಚನಗಿರಿ ಮೈಸೂರು ಮಹಾಸಂಸ್ಥಾನ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಮೈಸೂರು ಇಸ್ಕಾನ್‌ನ ಉಪಾಧ್ಯಕ್ಷ ಕಾರುಣ್ಯ ಸಾಗರ್ ಪ್ರಭು ಉಪಸ್ಥಿತರಿರುವರು.
ಉದ್ಯೋಗ ಮೇಳವನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಉದ್ಘಾಟಿಸಲಿದ್ದು, ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಎಚ್.ಸಿ ಬಸವರಾಜು, ಆರ್.ಲೋಕನಾಥ್(ಕೆಎಎಸ್), ಕಾವೇರಿ ಆಸ್ಪತ್ರೆ ಹಾಗೂ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಡಾ.ಚಂದ್ರಶೇಖರ್, ವಿಜಯವಾಣಿ ಮೈಸೂರು ಸ್ಥಾನಿಕ ಸಂಪಾದಕ ಎಂ.ಆರ್.ಸತ್ಯನಾರಾಯಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಪಿರಿಯಾಪಟ್ಟಣದ ಕಲ್ಪವೃಕ್ಷ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ಪಿ.ಪ್ರಶಾಂತ್ ಗೌಡ, ಸ್ಮಾರ್ಟ್ ಕ್ವಿಕ್ ಇಂಡಿಯಾ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ದೀಪುಗೌಡ, ಮಹಾಲಕ್ಷ್ಮೀ ಸ್ವೀಟ್ಸ್ ಹಾಗೂ ಭೀಮ ಪ್ರಾಪರ್ಟೀಸ್ ನಿರ್ದೇಶಕ ನಿತಿನ್ ಶಿವಕುಮಾರ್, ವೃತ್ತ ನಿರೀಕ್ಷಕ ಎಂ.ಕೆ.ದೀಪಕ್, ಚಲನಚಿತ್ರ ನಿರ್ದೇಶಕಿ ಡಿ.ಸುಮನ್ ಕಿತ್ತೂರು, ತಂಬಾಕು ಮಂಡಳಿ ಸದಸ್ಯ ವಿಕ್ರಮ್ ರಾಜ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಬ್ಬ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಸ್ನಾತಕೋತರ ಪದವೀಧರರು ಭಾಗವಹಿಸಬಹುದು. ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 2000ಕ್ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ. ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಮಾಹಿತಿಗೆ ಮೊ: 9686564192/ 6363144181 ಸಂಪರ್ಕಿಸಬಹುದು.
ಪದಾಧಿಕಾರಿಗಳಾದ ನಾಗಣ್ಣಗೌಡ, ಹರೀಶ್‌ಗೌಡ , ಮಲ್ಲೇಶ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ರವಿಚಂದ್ರ ಬೂದಿತಿಟ್ಟು ಇದ್ದರು.