19ರಂದು ಸಂಕಲ್ಪ ಯಾತ್ರೆ

06 yelandur 01
Published on

ಯಳಂದೂರು: ರಾಜ್ಯದಲ್ಲಿ ಎನ್‌ಪಿಎಸ್ ರದ್ದುಗೊಳಿಸಬೇಕೆಂದು ಆಗ್ರಹಿಸಿ ನ.19ರಂದು ಬೆಂಗಳೂರಿನಲ್ಲಿ ಸಂಕಲ್ಪ ಯಾತ್ರೆಗೆ ತಿರ್ಮಾನಿಸಲಾಗಿದ್ದು, ತಾಲೂಕಿನ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎನ್‌ಪಿಎಸ್ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವಣ್ಣ ಹೇಳಿದರು.


ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎನ್‌ಪಿಎಸ್ ನೌಕರರ ಸಭೆಯಲ್ಲಿ ಮಾತನಾಡಿ, 2006ರಿಂದ ನೇಮಕವಾದ ಸರ್ಕಾರಿ ನೌಕರರಿಗೆ ಎನ್‌ಪಿಎಸ್ ಜಾರಿಗೆ ಬಂದಿರುವುದರಿಂದ ಈ ಯೋಜನೆ ನೌಕರರಿಗೆ ಭದ್ರತೆ ಇಲ್ಲದಂತಾಗಿದೆ. ಇದರಿಂದ ಸಾಕಷ್ಟು ಕುಟುಂಬಗಳು ಬೀದಿಗೆ ಬಂದಿವೆ. ಈ ಹಿಂದೆ ಇದ್ದ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಬೇಕು. ಈ ಹಿನ್ನೆಲೆಯಲ್ಲಿ ನ.19ರಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.


ಎನ್‌ಪಿಎಸ್ ನೌಕರರ ಸಂಘದ ಕಾರ್ಯದರ್ಶಿ ಗಿರೀಶ್ ಕುಮಾರ್, ಉಪಾಧ್ಯಕ್ಷ ಎಲ್.ಮಹೇಶ್, ನದೀಂ, ದಿವಾಕರ್, ಮಹೇಶ್, ನಾಗರಾಜು, ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net