

ಚಿತ್ರದುರ್ಗ: ವಿಶ್ವ ಶೌಚಗೃಹ ದಿನಾಚರಣೆ ಪ್ರಯುಕ್ತ ನ.19ರಿಂದ ಡಿಸೆಂಬರ್ 10ರವರೆಗೆ ಜಿಲ್ಲೆಯಲ್ಲಿ‘ನಮ್ಮ ಶೌಚಗೃಹ-ನಮ್ಮ ಗೌರವ’ವಿಶೇಷ ಆಂ ದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು. ಗ್ರಾಮೀಣರಲ್ಲಿ ಸುರಕ್ಷಿತ ನೈರ್ಮಲ್ಯ, ಶು ಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಗೃಹಗಳನ್ನು ನಿರಂತರ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ನ.19ರಂದು ವಿಶ್ವ ಶೌಚಗೃಹ ದಿನವನ್ನು ಆಚರಿಸಲಾಗುತ್ತಿದೆ. ಈ ಆಂದೋಲನದಲ್ಲಿ ಜಿಲ್ಲಾ,ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿ ಜಾಗೃತಿ ವಿವಿಧ ಚಟು ವಟಿಕೆಗಳನ್ನು ಏರ್ಪಡಿಸಲಾಗುವುದು.
ಜಿಲ್ಲಾಮಟ್ಟದಲ್ಲಿ 19ರಂದು ಜಿಲ್ಲೆಯಲ್ಲಿ ವಿಶ್ವ ಶೌಚಗೃಹ ದಿನಾಚರಣೆಗೆ ಚಾಲನೆ ನೀಡಲಾಗುವುದು. ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ನಡೆಸಲಾಗುವುದು. ಶೌಚಗೃಹ ಬಳಕೆ ಕುರಿತು ಸಮೀಕ್ಷೆ, ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ಶಿಬಿರ ಆಯೋಜಿಸಲಾಗುವುದು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೌಚಗೃಹ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದರು.
ಆರೋಗ್ಯ,ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಂದೋಲನಕ್ಕೆ ಸಹಯೋಗ ನೀಡಲಿವೆ. ಶೌಚಗೃಹ ಇಲ್ಲದ ಆ ಸ್ಪತ್ರೆ, ಅಂಗನವಾಡಿ ಹಾಗೂ ಶಾಲೆಗಳನ್ನು ಪಟ್ಟಿ ಮಾಡಿ ಶೌಚಗೃಹ ನಿರ್ಮಾಣಕ್ಕೆ ಕ್ರಮವಹಿಸಲಿವೆ ಎಂದು ಸಿಇಒ ಹೇಳಿದರು.
---