1ಕೆಜಿ 790ಗ್ರಾಂ ಗಾಂಜಾ ಜಪ್ತಿ

ganja
Published on

ಹುಬ್ಬಳ್ಳಿ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ವಾಹನ ಸಮೇತ ಬಂಧಿಸಿ, 1.79ಲಕ್ಷ ರೂ. ಮೌಲ್ಯದ 1ಕೆಜಿ 790 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಧಾರವಾಡ ಕಾಮನಕಟ್ಟಿ ಗೌಡರ ಓಣಿಯ ವಜಾದಅಲಿ ರಾಹುತ ಬಂಧಿತ. ವೇಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಈತ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net