ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುಭಾರಂಭ

PUC Exam B
Published on

ಹಾವೇರಿ: ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ಶುಭಾರಂಭಗೊಂಡಿದ್ದು, ಒಟ್ಟು 13,349 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 585 ವಿದ್ಯಾರ್ಥಿಗಳು ಗೈರಾಗಿದ್ದರು.
ಮೊದಲ ದಿನ ಗುರುವಾರ ಕನ್ನಡ ಭಾಷಾ ವಿಷಯದ ಪರೀಕ್ಷೆ ಜರುಗಿತು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಕಾವಲು ಹಾಕಲಾಗಿತ್ತು. ಪರೀಕ್ಷೆ ಯಾವುದೇ ತೊಂದರೆ ಇಲ್ಲದೇ ಶಾಂತಿಯುತವಾಗಿ ಜರುಗಿತು ಎಂದು ಡಿಡಿಪಿಯು ಡಾ.ಉಮಶಪ್ಪ ‘ವಿಜಯವಾಣಿ’ಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net