ವಿಜಯನಗರ 1ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟ

64
Published on

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಬೆಂಬಲಿಸಿ ವಿಜಯನಗರ ಒಂದನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ವಿಜಯನಗರದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ನಮ್ಮ ನೀರು ನಮ್ಮ ಹಕ್ಕು’ ಎಂದು ಘೋಷಣೆ ಕೂಗಿದರು. ಈ ಕೂಡಲೇ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಎ.ರವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net