ಹೈ ಜಂಪ್, ಟೆನ್ನಿಕಾಯ್ಟಿನಲ್ಲಿ ಪ್ರಥಮ ಸ್ಥಾನ

15-GPT-2
Published on

ಗುಂಡ್ಲುಪೇಟೆ : ಇತ್ತೀಚೆಗೆ ಹನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗುಂಡ್ಲುಪೇಟೆ ಪಟ್ಟಣದ ಕೆ.ಎಸ್. ನಾಗರತ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹೈ ಜಂಪ್‌ನಲ್ಲಿ ಪ್ರಥಮ ಸ್ಥಾನ ಹಾಗೂ ಟೆನ್ನಿಕಾಯ್ಟಿನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗಾಗಿ ಶ್ರೀ ಜವಾಹರ್ ಎಜುಕೇಶನ್ ಟ್ರಸ್ಟ್ (ರಿ )ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net