ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಸೋಂಕು

Deepa Cholan 5
Published on

ಧಾರವಾಡ: ಜಿಲ್ಲೆಯಲ್ಲಿ ಶನಿವಾರ ಸಂಜೆ 2 ಕೋವಿಡ್ (ಕರೊನಾ) ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

26 ವರ್ಷದ (ಪಿ-2807) ಮಹಿಳೆ ಹಾಗೂ 27 ವರ್ಷದ (ಪಿ-2808) ಮಹಿಳೆಗೆ ಸೋಂಕು ತಗುಲಿದೆ. ಪಿ-2807 ಅವರು ಪಿ- 1123 ಸಂಖ್ಯೆ ರೋಗಿಯ ಸಂಪರ್ಕ ಹೊಂದಿದ್ದರೆ, ಪಿ-2808 ಮಹಾರಾಷ್ಟ್ರ ರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಈಗಾಗಲೇ ಕ್ವಾರಂಟೈನ್​ನಲ್ಲಿ ಇದ್ದರು. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕಿಮ್್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದ್ದು, ಈಗಾಗಲೇ 11 ಜನ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

438 ಶಂಕಿತರು ಪತ್ತೆ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆಯಿಂದ 24 ಗಂಟೆ ಅವಧಿಯಲ್ಲಿ 438 ಶಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಂಕಿತರ ಜತೆಗೆ ನಿಗಾ ವಹಿಸಿದವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಶುಕ್ರವಾರ ಇದ್ದ 15381 ನಿಗಾ ವಹಿಸಿದವರ ಸಂಖ್ಯೆ ಶನಿವಾರ 15811ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆ ಯಲ್ಲಿ 14999 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 13573 ಜನರ ವರದಿ ನೆಗೆಟಿವ್ ಬಂದಿವೆ. 46 ಪ್ರಕರಣಗಳು ಪಾಸಿಟಿವ್ ಬಂದಿದ್ದು, 35 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 11 ಜನರು ಗುಣವಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 1391 ವರದಿಗಳು ಬರಬೇಕಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ಓಡಾಟ: ಅಂತರಜಿಲ್ಲೆಯಿಂದ ಬಂದು ಕ್ವಾರಂಟೈನ್​ನಲ್ಲಿದ್ದ ಇಲ್ಲಿನ ಕಿಮ್ಸ್​ನ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ಹೊರಗಡೆ ಓಡಾಡಿದ ಘಟನೆ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಿಂದ ಬಂದು ಹಾಸ್ಟೆಲ್​ನಲ್ಲಿ ಉಳಿದಿದ್ದ ಈ ವಿದ್ಯಾರ್ಥಿ ಕೈಗೆ ಸೀಲ್ ಹಾಕಲಾಗಿತ್ತು. ಪೊಲೀಸರ ಕೈಗೆ ಸಿಕ್ಕರೂ ಸರಿಯಾದ ಮಾಹಿತಿ ನೀಡದೆ ಪರಾರಿಯಾಗಿದ್ದಾನೆ. ಕಿಮ್್ಸ ಆಡಳಿತ ಮಂಡಳಿ ತಿಳಿಹೇಳಿದರೂ ಹೊರಗಡೆ ಓಡಾಡಿದ್ದು, ವೈದ್ಯ ವಿದ್ಯಾರ್ಥಿಗೊಂದು ನ್ಯಾಯ, ತಮಗೊಂದು ನ್ಯಾಯವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net