

ಕೆಜಿಎಫ್- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇದುವರೆಗೆ 500 ಕೋಟಿ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಮೂಲಕ ಪ್ರಯಾಣ ಮಾಡಿದ್ದರೆ. ಕೆಜಿಎಫ್ ಕ್ಷೇತ್ರದಲ್ಲಿ 2 ಕೋಟಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಸಂಚರಿಸುವ ಮೂಲಕ ಅನುಕೂಲ ಪಡೆದುಕೊಂಡಿದ್ದಾರೆ ಎಂದು ಶಾಸಕಿ ರೂಪಕಲಾ ಹೇಳಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯಡಿ ಕಳೆದ 2 ವರ್ಷಗಳಲ್ಲಿ 500 ಕೋಟಿ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರಿಗೆ ಇಲಾಖೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸೋಮವಾರ ನಗರದ ಕುವೆಂಪು ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಲಾಭವನ್ನು ರಾಜ್ಯದ ಮಹಿಳೆಯರು ಪಡೆದಿದ್ದಾರೆ. ಇದು ಸಾಧನೆ ಅಲ್ಲವೇ?, ಬಡವರ ಸಂಕಷ್ಟ ನಿವಾರಣೆ ಮಾಡುವುದು ಸಾಧನೆ ಅಲ್ಲವೇ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ವಿರೋಧ ಪಕ್ಷಗಳು ಡಂಗುರ ಬಡಿದರು, ಮಹಿಳೆಯರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ ಎಂಬುದನ್ನು ಹಲವು ಬಾರಿ ಸಾಭೀತುಪಡಿಸಿದಿದ್ದಾರೆ ಎಂದರು.
ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿ ಮಾಡಲಾಗಿದೆ. 10 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ, 8 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿಮಾರ್ಣವಾಗಿದೆ. ಇದೀಗ 8 ಕೋಟಿ ರೂ. ವೆಚ್ಚದಲ್ಲಿ ಸಾರಿಗೆ ಇಲಾಖೆಯ ಆರ್ಟಿಒ ನೂತನ ಕಟ್ಟಡವು ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು ಶೀಘ್ರ ಉದ್ಘಾಟಿಸಲಾಗುವುದು ಎಂದರು.
ಜಿಲ್ಲೆಯಲ್ಲಿ 10.24 ಲಕ್ಷ ಮಹಿಳಾ ಫಲಾನುಭವಿಗಳು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣ ಮಾಡಿರುವುದು ದಾಖಲೆಯಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಸಾರಿಗೆ ಬಸ್ ಹತ್ತಿದ ಶಾಸಕಿ ಪುರುಷ ಪ್ರಯಾಣಿಕರ ಟಿಕೆಟ್ಗಳನ್ನು ಖರೀದಿ ಮಾಡಿ ಎಲ್ಲರೊಂದಿಗೆ ಒಂದು ರೌಂಡ್ ಹೋಗಿ ಬಂದರು.
ತಹಸೀಲ್ದಾರ್ ನಾಗವೇಣಿ, ಡಿಪೋ ವ್ಯವಸ್ಥಾಪಕಿ ನೇತ್ರಾವತಿ, ವಕೀಲ ಪದ್ಮನಾಭರೆಡ್ಡಿ, ರಾಮಕೃಷ್ಣರೆಡ್ಡಿ, ಬೇತಮಂಗಲ ಗ್ರಾಪಂ ಅಧ್ಯಕ್ಷ ವಿನು ಕಾರ್ತಿಕ್, ಪುರೋಷತ್ತಮರೆಡ್ಡಿ, ಶಶಿಕುಮಾರ್ ಇದ್ದರು.