ರೈಲಿನಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ಪತ್ತೆ: ಹವಾಲಾ ಹಣ ಶಂಕೆ? ಓಡೋಡಿ ಬಂದ್ರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು

moneytrain
Published on

ಉತ್ತರಕನ್ನಡ: ರೈಲಿನಲ್ಲಿ ದಾಖಲೆ ಇಲ್ಲದೇ ಅಕ್ರಮವಾಗಿ ಹಣ ಪತ್ತೆಯಾದ ಹಿನ್ನಲೆಯಲ್ಲಿ ಕಾರವಾರಕ್ಕೆ ಆದಾಯ ತೆರಿಗೆ ಅಧಿಕಾರಿಗಳು ಆಗಮಿಸಿದ್ದಾರೆ.

ಮುಂಬೈನಿಂದ ಮಂಗಳೂರಿಗೆ 2 ಕೋಟಿ ರೂ. ಹಣ ಸಾಗಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸಲಾಗುತಿತ್ತು.ಪತ್ತೆಯಾದ ಹಣ ಹವಾಲ ಹಣವಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಟಿಕೆಟ್​ ಕೂಡ ಪಡೆದಿರಲಿಲ್ಲ, ಸಂಶಯ ಬಂದು ರೈಲ್ವೇ ಟಿಸಿ ವಿಚಾರಣೆಗೊಳಪಡಿಸಿದಾಗ ಆತನ ಬಳಿ ಹಣ ಇರುವುದು ಪತ್ತೆಯಾಗಿದೆ.

ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಬಂಧಿತ ಆರೋಪಿಯಾಗಿದ್ದು, ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಅಕ್ರಮ ಹಣ ಪತ್ತೆಯಾದ್ದರಿಂದ ಮಂಗಳೂರಿನಿಂದ ಕಾರವಾರಕ್ಕೆ ಆಗಮಿಸಿದ ಅಧಿಕಾರಿಗಳು, ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net