ಕಾರ್ ಪಲ್ಟಿಯಾಗಿ ಇಬ್ಬರು ಯುವಕರು ಸಾವು

13 hkr 04
Published on

ಹಿರೇಕೆರೂರ: ಅತಿ ವೇಗವಾಗಿ ಚಲಿಸುತ್ತಿದ್ದ ಕಾರ್ ಪಲ್ಟಿ ಹೊಡೆದಿದ್ದರಿಂದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸುತ್ತಕೋಟಿ ಗ್ರಾಮದ ಚಿಕ್ಕಬೂದಿಹಾಳ ಕ್ರಾಸ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದೆ.

ಹಂಸಭಾವಿ ಗ್ರಾಮದ ಕಾರ್ತಿಕ ಈಳಿಗೇರ (21), ಪವನ ಭೋಗಾವಿ (23) ಮೃತರು. ಸಂತೋಷ ರಾಗಿಕೊಪ್ಪ ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ರಾಣೆಬೆನ್ನೂರಿನಿಂದ ರಾಜ್ಯ ಹೆದ್ದಾರಿ ಮೂಲಕ ಕಾರ್​ನಲ್ಲಿ ಹಂಸಭಾವಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ತಾಲೂಕಿನ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾರ್ಗವಾಗಿ ಸಾಗುತ್ತಿದ್ದ ಸೊರಬ ತಾಲೂಕಿನ ಶಾಸಕ ಕುಮಾರ ಬಂಗಾರಪ್ಪ ಘಟನೆ ಬಗ್ಗೆ ವಿಚಾರಿಸಿ, ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net