ಶಾಲಾ ವಾಹನ-KKRTC ಬಸ್​ ಡಿಕ್ಕಿ; ಇಬ್ಬರು ಸಾವು, 17 ಮಂದಿ ಗಂಭೀರ

Manvi Accident
Published on

ರಾಯಚೂರು: ಶಾಲಾ ವಾಹನ ಹಾಗೂ ಕೆಎಸ್​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಸಮರ್ಥ್​ ಅಮರೇಶ್​ (07) ಹಾಗೂ ಶ್ರೀಕಾಂತ್​ ಮಾರೇಶ್​ (07) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಲೊಯೋಲಾ​ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕಾಲು ತುಂಡಾಗಿದ್ದು, ಗಾಯಾಳುಗಳನ್ನು ರಿಮ್ಸ್​ಗೆ ದಾಖಲಿಸಲಾಗಿದೆ.

Manvi Accident

ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲಾ ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ರಾಯಚೂರು ಕಡೆ ಹೊರಟ್ಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಹನ ನಜ್ಜುಗುಜ್ಜಾಗಿದ್ದು, ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್​ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ನಿತೀಶ್​, ಮೃತರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು ಸರ್ಕಾರದ ವತಿಯಿಂದ ಘೋಷಿಸಲಾಗಿದೆ. ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸಲಾಗುವುದು. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net