

ಆನೇಕಲ್: ಕುಡಿದ ಮತ್ತಿನಲ್ಲಿ ಕ್ಯಾಂಟರ್ ಚಾಲನೆ ಚಾಲನೆ ಮಾಡಿದ ಪರಿಣಾಮ ಪಾದಚಾರಿಗಳಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಬಯೋಕಾನ್ ಕಂಪನಿ ಮುಂಭಾಗ ನಡೆದಿದೆ.
ಮೃತ ದುರ್ದೈವಿಗಳನ್ನು ಆಶಿಕ್ (28), ಮನೋಜ್ ಕುಮಾರ್(30) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕ್ಯಾಂಟರ್ ಚಲಾಯಿಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯೂ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪ್ರದೇಶದಲ್ಲಿರುವ ಬಯೋಕಾನ್ ಕಂಪನಿ ಮುಂಭಾಗನಡೆದಿದ್ದು, ಕ್ಯಾಂಟರ್ ಚಾಲಕ ಪಾನಮತ್ತನಾಗಿ ವಾಹನ ಚಾಲನೆ ಮಾಡಿತ್ತಿದ್ದ ಎಂದು ವರದಿಯಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸ್ ಬ್ಯಾರಿಕೇಡ್ಗಳಿಗೆ ಗುದ್ದಿ ಕ್ಯಾಂಟರ್ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೆಬ್ಬಗೋಡಿ ಪೊಲೀಸರು ಚಾಲಕ ಹಾಗೂ ಕ್ಲೀನರ್ನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ಧಾರೆ.