ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

19-gdg-9 crime
Published on

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ ಪವಾರ ಮತ್ತು ಅಸ್ಲಮ್ ಡಾಲಾಯತ್ ಬಂಧಿತರು. ಅವರಿಂದ 1.10 ಲಕ್ಷ ರೂ. ಮೌಲ್ಯದ ಎರಡು ಟಿವಿ, ಒಂದು ಬೈಕ್ ಮತ್ತು 18 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಇತ್ತೀಚೆಗೆ ಸ್ಥಳೀಯ ರಾಧಾಕೃಷ್ಣ ನಗರ ಮತ್ತು ಸಾರಿಗೆ ನಗರದಲ್ಲಿ ಮನೆ ಕಳ್ಳತನ ಮಾಡಿದ್ದರು. ಪಿಎಸ್​ಐ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net