

ಚಿತ್ರದುರ್ಗ: ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ನಡೆಸಬೇಕೆಂದು ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಜಿಪಂ, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ (ಗ್ರಾಮ್ಸ್)ಸಹಯೋಗದಲ್ಲಿ ಜಲಜೀವನ್‌ಮಿಷನ್, ಸ್ವಚ್ಛ ಭಾರತ್‌ಮಿಷನ್ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ (ಕೆಎಸ್‌ಆರ್‌ಡಬ್ಲ್ಯೂಎಸ್‌ಪಿ)ಕುರಿತ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳಲ್ಲಿ ಗ್ರಾಪಂಗಳು ನೀರಿನ ಕಾರ್ಯಾಚರಣೆ ಹಾಗೂ ನಿರ್ವಹಣೆ ನೀತಿಯನ್ನು ಸೂಕ್ತವಾಗಿ ಅಳವಡಿಸಿಕೊಳ್ಳಬೇಕು. ಸಭೆಯಲ್ಲಿ 2025-26ನೇ ಸಾಲಿನ ನೀರಿನ ಬಜೆಟ್ ತಯಾರಿಸುವುದರೊಂದಿಗೆ ಈಗಾಗಲೇ ಘೋಷಿಸಿರುವಂತೆ ಗ್ರಾಮಗಳಲ್ಲಿ 24/7 ನೀರು ಸರಬರಾಜಿಗೆ ಕ್ರಮ ವಹಿಸಬೇಕು. ಸಮಿತಿ ಸಭೆಗಳ ನಡಾವಳಿಗಳನ್ನು ತಪ್ಪದೇ ಜಿಪಂಗೆ ಸಲ್ಲಿಸಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗದ ಎಇಇಗಳಾದ ದಯಾನಂದಸ್ವಾಮಿ, ಲಿಂಗರಾಜು, ಜೆಜೆಎಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್. ನಾಡರ್, ಜಿಲ್ಲಾ ಐಇಸಿ ಸಮಾಲೋಚಕರಾದ ಬಿ.ಸಿ.ನಾಗರಾಜು, ಕೆಎಸ್‌ಆರ್‌ಡಬ್ಲ್ಯೂಎಸ್‌ಪಿ ಸಮಾಲೋಚಕ ಕಿರಣ್‌ಕುಮಾರ್, ಚಂದ್ರಕಾಂತ್, ಪ್ರವೀಣ್, ಯಲಪ್ಪ, ಗೀತಾ, ಲಕ್ಷ್ಮೀ, ಗ್ರಾಮ್ಸ್ ತಂಡದ ನಾಯಕರಾದ ನಾಗರಾಜ್, ಪ್ರತಾಪ್, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಇದ್ದರು.