20 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ

SABHE
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಗ್ರಾಮ ಸಮಿತಿ ವಿಶೇಷ ಸಭೆಯಲ್ಲಿ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿದರು.
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ ಗ್ರಾಮದ ಸಮಸ್ತ ಭಕ್ತರ ಸಹಕಾರದಿಂದ ದೇವಸ್ಥಾನದ ಗರ್ಭಗುಡಿ ನಿರ್ಮಾಣಗೊಳ್ಳಲಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ಹಂತದ ಸಮಗ್ರ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ ಎಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಹೇಳಿದರು. ದೇವಳ ಪ್ರಾಂಗಣದಲ್ಲಿ ಜೀರ್ಣೋದ್ಧಾರ ಪೂರ್ವಭಾವಿಯಾಗಿ ಬುಧವಾರ ನಡೆದ ಗ್ರಾಮ ಸಮಿತಿ ವಿಶೇಷ ಸಭೆಯಲ್ಲಿ ಮಾತನಾಡಿ, ಎರಡು ಹಂತದಲ್ಲಿ ದೇಗುಲದ ಪುನಃ ನಿರ್ಮಾಣವಾಗಲಿದೆ. ಗ್ರಾಮಸ್ಥರ ಸಹಕಾರ ಅಗತ್ಯವಿದ್ದು, ದೇವಳ ಸಂಕೋಚಕ್ಕೆ ತಂತ್ರಿಗಳು ಸೂಕ್ತ ದಿನ ನಿಗದಿಪಡಿಸಿದ್ದಾರೆ. ವಿವಿಧ ಸಮಿತಿಗಳು ಜವಾಬ್ದಾರಿಗಳ ವಹಿಸಿಕೊಳ್ಳುವ ಮೂಲಕ ಜಾಗೃತವಾಗಬೇಕು ಎಂದರು. ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ರಾಜೇಶ್ ಶೇರಿಗಾರ್, ವಿಶುಕುಮಾರ್ ಶೆಟ್ಟಿಬಾಲ್, ಕೇಶವ ಅಮೀನ್, ರವೀಂದ್ರನಾಥ ಜಿ. ಹೆಗ್ಡೆ, ಮಾತನಾಡಿದರು. ಆನುವಂಶಿಕ ಮೊಕ್ತೇಸರ ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳರು, ಅರ್ಚಕರಾದ ಪದ್ಮನಾಭ ಭಟ್, ವೈ. ಗುರುರಾಜ ಭಟ್, ರಾಘವೇಂದ್ರ ನಾವಡ ಉಪಸ್ಥಿತರಿದ್ದರು. ಉಪಾಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಸ್ವಾಗತಿಸಿದರು. ಆನುವಂಶಿಕ ಮೊಕ್ತೇಸರ ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ ಪ್ರಸ್ತಾವನೆಗೈದರು. ಕಾರ್ಯದರ್ಶಿ ಪದ್ರಜಯ ಶೆಟ್ಟಿ ವಂದಿಸಿದರು. ಮುರಲೀನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಂತ್ರಿಗಳಿಂದ ಬ್ರಹ್ಮಕಲಶದ ವಿವರ

2025 ಏ.3ರಂದು ಬಾಲಾಲಯ ಪ್ರತಿಷ್ಠಾಪನೆ, 2026 ಮೀನ ಸಂಕ್ರಮಣದಲ್ಲಿ ಕ್ಷೇತ್ರದಲ್ಲಿ ಬ್ರಹ್ಮಕಲಶ ನಡೆಯಲಿದ್ದು, ಈ ಕುರಿತು ಕ್ಷೇತ್ರದ ತಂತ್ರಿ ರಾಧಾಕೃಷ್ಣ ಉಪಾಧ್ಯಾಯ ಕಂಬ್ಳಕಟ್ಟ ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net