ದೋಷಪೂರಿತ 20 ಸೈಲೆನ್ಸರ್ ನಾಶ

Defective silencer destroyed by road roller
ಶಿರಾಳಕೊಪ್ಪ ಠಾಣೆ ಪೊಲೀಸರು ರೋಡ್ ರೋಲರ್ ಮೂಲಕ ದೋಷಪೂರಿತ ಸೈಲೆನ್ಸರ್‌ಗಳನ್ನು ನಾಶಪಡಿಸಿದರು.
Published on

ಶಿವಮೊಗ್ಗ: ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದ 20 ದೋಷಪೂರಿತ ಸೈಲೆನ್ಸರ್‌ಗಳನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ರೋಡ್ ರೋಲರ್ ಮೂಲಕ ಭಾನುವಾರ ನಾಶಪಡಿಸಿದರು.

ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಮದರಖಂಡಿ ಸಮ್ಮುಖದಲ್ಲಿ ಶಿರಾಳಕೊಪ್ಪ ಟೌನ್ ಬಸ್ ನಿಲ್ದಾಣದ ಹತ್ತಿರ ರೋಡ್ ರೋಲರ್ ಹತ್ತಿಸಿ ನಾಶಪಡಿಸಿದರು. ಶಿಕಾರಿಪುರ ವೃತ್ತ ನಿರೀಕ್ಷಕ ರುದ್ರೇಶ್, ಶಿರಾಳಕೊಪ್ಪ ಠಾಣೆ ಪಿಎಸ್‌ಐ ಮಂಜುನಾಥ್ ಸಿದ್ದಪ್ಪ ಕುರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ದೋಷಪೂರಿತ ಸೈಲೆನ್ಸರ್ ಬಳಸುವ ಚಾಲಕ, ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net