ನರಗುಂದದಲ್ಲಿ 20 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ

11 NRD- 4
ನರಗುಂದ ಪಟ್ಟಣದ ವಿವಿಧೆಡೆ ಪುರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮಂಗಳವಾರ ನಿಷೇಧಿತ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡರು
Published on

ನರಗುಂದ: ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಪುರಸಭೆ ಮತ್ತು ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 20 ಕೆಜಿ ನಿಷೇಧಿತ ಪ್ಲಾಸ್ಟಿಕ್ ಚೀಲ ವಶಪಡಿಸಿಕೊಂಡಿದ್ದಾರೆ.

ಏಕಬಳಕೆಯ ಪ್ಲಾಸ್ಟಿಕ್ ಲೋಟ, ಚಮಚ, ಕ್ಯಾರಿಬ್ಯಾಗ್, ಊಟದ ತಟ್ಟೆ, ಹಾಳೆ ಇನ್ನಿತರ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿನ 10ಕ್ಕೂ ಅಧಿಕ ಅಂಗಡಿಗಳ ಮೇಲೆ ದಾಳಿ ನಡೆಸಿ, 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಂಡಳಿಯ ವಿಕಾಸ ಪಟ್ಟಣಶೆಟ್ಟಿ, ಮಂಜುನಾಥ ಮಲ್ಲಾಪುರ, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಸಂಗಮೇಶ ಬ್ಯಾಳಿ, ಕಿರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ ಗವಿಮಠ, ಮಹಾಂತೇಶ ಚಲವಾದಿ, ಹಡಗಲಿ, ಬಸವರಾಜ ಚಲವಾದಿ, ರಾಚಪ್ಪ ಕೆರೂರ, ಸಿದ್ದು ಕಿಲಾರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net