ಲೈಂಗಿಕ ದೌರ್ಜನ್ಯ ಎಸಗಿದ್ದವಗೆ 20 ವರ್ಷ ಜೈಲು

dist Court
ಜಿಲ್ಲಾ ನ್ಯಾಯಾಲಯದ ಹೊರನೋಟ.
Published on

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.10 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ 6 ತಿಂಗಳ ಸಾದಾ ಕಾರಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಭದ್ರಾವತಿ ತಾಲೂಕಿನ 21 ವರ್ಷದ ಯುವಕ ಶಿಕ್ಷೆಗೆ ಒಳಗಾದವ. ಈತ 2020ರಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಭದ್ರಾವತಿಯ ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಇ.ಒ.ಮಂಜುನಾಥ್ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಅವರಿಗೆ ಭದ್ರಾವತಿ ಗ್ರಾಮಾಂತರ ಠಾಣೆ ಎಎಸ್‌ಐ ದಿವಾಕರ್ ರಾವ್ ಅವರು ಸಹಾಯಕರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net