20 ಕೋಟಿ ಮನೆಗಳ ಮೇಲೆ ತಿರಂಗಾ ಧ್ವಜ ಹಾರಾಟಕ್ಕೆ ಸಂಕಲ್ಪ: ಬಿ.ವೈ.ವಿಜಯೇಂದ್ರ

SKP WEB
Published on

ಶಿಕಾರಿಪುರ: 75ನೇ ಸ್ವಾತಂತ್ರ್ಯ ಮಹೋತ್ಸವ ಸಂದರ್ಭದಲ್ಲಿ ಬಿಜೆಪಿಯಿಂದ 20 ಕೋಟಿಗೂ ಹೆಚ್ಚು ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಸಂಕಲ್ಪ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯದಲ್ಲಿ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡುವಂತೆ ಮಾಡುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ 58,000 ಬೂತ್‌ಗಳು, 311 ಮಂಡಲಗಳು, 2500 ಶಕ್ತಿ ಕೇಂದ್ರ ಮತ್ತು ಮಹಾಶಕ್ತಿ ಕೇಂದ್ರಗಳಿವೆ. ಈ ಎಲ್ಲ ಕೇಂದ್ರಗಳಲ್ಲಿ ನಾವು ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ರಾಷ್ಟ್ರೀಯ ಚಿಂತನೆಗಳ ಮೇಲೆ ಕಟ್ಟಿದ ಪಕ್ಷ. ನಮಗೆ ದೇಶ ಮುಖ್ಯ. ದೇಶದ ಅಖಂಡತೆ ಮತ್ತು ಸಮಗ್ರತೆಗೆ ಪಕ್ಷ ಯಾವಾಗಲೂ ಸಿದ್ಧ ಮತ್ತು ಬದ್ಧವಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದ ಮತ್ತು ದಾಖಲಾದ ಹಾಗೂ ಅಳಿಸಲಾರದ ಸಂಗತಿಯೆಂದರೆ ಈಸೂರಿನ ಸ್ವಾತಂತ್ರ್ಯ ಸಂಗ್ರಾಮ. ಈಸೂರನ್ನು ಸ್ವತಂತ್ರ ಗ್ರಾಮವೆಂದು ಘೋಷಿಸಿಕೊಂಡು ರಾಷ್ಟ್ರಭಕ್ತಿ ಮೆರೆದಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಈಸೂರಿನ ಐವರು ಸ್ವಾತಂತ್ರ್ಯ ಸೇನಾನಿಗಳು ಹುತಾತ್ಮರಾದರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net