20 ರಂದು ಭೀಮ ಸಂಕಲ್ಪ ಸಮಾವೇಶ

Published on

ಗುಂಡ್ಲುಪೇಟೆ: ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಆ.20 ರಂದು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಭೀಮ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜ್ ಹೇಳಿದರು.


ದಲಿತ ಸಂಘಟನೆಗಳು, ಮಾನವ ಬಂಧುತ್ವ ವೇದಿಕೆ ಹಾಗೂ ಇತರ ಪ್ರಗತಿಪರ ಸಂಘಟನೆಗಳು ಸಹಯೋಗದಲ್ಲಿ ಪೂಜ್ಯ ಭಂತೇಜಿ ಮತ್ತು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಸಂವಿಧಾನದ ಆಶಯಗಳ ಉಳಿವಿಗಾಗಿ ಚಾಮರಾಜನಗರದಲ್ಲಿ ಭೀಮ ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ ಭಾಗವಹಿಸುವರು. ಶಾಸಕ .ಪುಟ್ಟರಂಗಶೆಟ್ಟಿ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿ ತಾಲೂಕಿನ ಸಂಘಟನೆಗಳ ಮುಖಂಡರು ಮತ್ತು ಹೋರಾಟಗಾರರು ಪ್ರತಿ ಗ್ರಾಮಕ್ಕೂ ಭೇಟಿ ನೀಡಿ, ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.


ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಹಳ್ಳಿ, ಮುಖಂಡರಾದ ಆರ್.ಸೋಮಣ್ಣ, ನಂಜುಂಡಸ್ವಾಮಿ. ರಂಗಸ್ವಾಮಿ, ಬಂಗಾರಸ್ವಾಮಿ, ಕೃಷ್ಣಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net