20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

file79dgbf3jbx31dc7fu66w016345834171666962237
Published on

ಮೈಸೂರು: ನ್ಯಾಯಾಲಯಕ್ಕೆ ಹಾಜರಾಗದೆ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಗಂಧದ ಮರದ ತುಂಡುಗಳನ್ನು ಕಳ್ಳತನ ಮಾಡಿದ್ದ ಸಂಬಂಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ 2001ರಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ. ಇದರಿಂದಾಗಿ ಪ್ರಕರಣವು ಎಲ್‌ಪಿಸಿ ಆಗಿದ್ದು, ಈ ಆರೋಪಿಯ ಪತ್ತೆಗಾಗಿ ಕೃಷ್ಣರಾಜ ಪೊಲೀಸ್ ಠಾಣೆಯ ಎಎಸ್‌ಐ ಚಂದ್ರನಾಯಕ ಹಾಗೂ ಸಿಎಚ್‌ಸಿ ಹರೀಶ್ ಅವರನ್ನು ನೇಮಿಸಲಾಗಿತ್ತು.

ಬಾತ್ಮಿದಾರರ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net