20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

2Anand7 ( raju chandavani Aaropi)
Published on

20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಚಿಕ್ಕೋಡಿ( ಸಂಕೇಶ್ವರ) : ಕಳ್ಳತನ ಪ್ರಕರಣದಲ್ಲಿ ಜಾಮಿನು ಪಡೆದು ಪರಾರಿಯಾಗಿದ್ದ ತಲೆಮರೆಸಿಕೊಂಡಿದ್ದ ಆರೋಪಿಯನ್ನು 20 ವರ್ಷದ ಬಳಿಕ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಜು ಪ್ರತಾಪರಾವ್ ಚಂದವಾನಿ (65) ಬಂದಿತ ಆರೋಪಿ.ಈತ 2005 ರಲ್ಲಿ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ,ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ ರಾಜು ಮರಳಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 20 ವರ್ಷಗಳಿಂದ ತಲೆಮರಿಸಿಕೊಂಡಿದ್ದನು.

ಆರೋಪಿಯನ್ನ ಪತ್ತೆ ಹಚ್ಚಿದ ಸಂಕೇಶ್ವರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net