

ಯಾದಗಿರಿ: ಪ್ರತಿ ವಿಧಾನಸಭಾ ಮತಕ್ಷೇತ್ರದಿಂದ ಕನಿಷ್ಠ 5 ಸಾವಿರ ಮತಗಳನ್ನು ಪಡೆಯುವ ಗುರಿ ಹೊಂದಬೇಕು ಎಂದು ಎಂಎಲ್ಸಿ ಎನ್.ರವಿಕುಮಾರ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಈಶಾನ್ಯ ಪದವೀಧರ ಮತಕ್ಷೇತ್ರ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ನೋಂದಣಿ ಕಾರ್ಯಕುರಿತು ಗುರುವಾರ ನಗರದ ಜಿಲ್ಲಾ ಬಿಜೆಪಿ ಕಾಯರ್ಾಲಯದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ಮೊದಲು ನಮ್ಮ ವಶದಲ್ಲಿದ್ದ ಈಶಾನ್ಯ ಮತಕ್ಷೇತ್ರ ಸಧ್ಯ ಕಾಂಗ್ರೆಸ್ ವಶದಲ್ಲಿದೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಅಭ್ಯಥರ್ಿ ಗೆಲುವಿಗೆ ಕಾರ್ಯಕರ್ತರು ಇಂದಿನಿಂದಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿದೆ ಎಂದು ಯಾರೂ ಎದೆಗುಂದುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳಿಂದಾಗಿ ನಮ್ಮ ಸ್ವಲ್ಪ ಹಿನ್ನಡೆಯಾಗಿದೆ. ಆದರೆ, ಬರುವ ಎಲ್ಲ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವ ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ಪದವೀಧರ ಚುನಾವಣೆ ನಂತರ ಲೋಕಸಭೆಗೆ ಚುನಾವಣೆ ಎದುರಾಗಲಿದ್ದು, ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು. ಅಲ್ಲದೆ, ನನ್ನ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲಾಗುವುದು ಎಂದು ತಿಳಿಸಿದರು.