200 ಟಿಪ್ಪರ್ ಮರಳು ವಶ

17MDG4 AKRAM MARALU
Published on

ಮುಂಡರಗಿ: ತಾಲೂಕಿನ ತುಂಗಭದ್ರಾ ನದಿ ಭಾಗದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಪಡಿಸಿಕೊಳ್ಳುವ ಕಾರ್ಯಾಚರಣೆ ಗುರುವಾರವೂ ಮುಂದುವರಿಯಿತು. ತಾಲೂಕಿನ ಶೀರನಹಳ್ಳಿ, ಗಂಗಾಪೂರ ಭಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 200 ಟಿಪ್ಪರ್​ಗಳಷ್ಟು ಮರಳನ್ನು ಗುರುವಾರ ವಶಕ್ಕೆ ಪಡೆದು ಗಂಗಾಪೂರ ಬಳಿಯ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಂಗ್ರಹಿಸಲಾಯಿತು. ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿವೈಎಸ್ಪಿ ಶಂಕರ ರಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಆಶಪ್ಪ ಪೂಜಾರಿ, ಸಿಪಿಐ ಸುನೀಲ ಸವದಿ, ಕಂದಾಯ ನಿರೀಕ್ಷಕ ಎಚ್.ಎಂ. ಪಾಟೀಲ ಇತರರಿದ್ದರು.

ಮಂಗಳವಾರ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ಪ್ರಾರಂಭವಾಗಿದೆ. ಈವರೆಗೆ ಸುಮಾರು 550 ಟಿಪ್ಪರ್​ಗಳಷ್ಟು ಮರಳು ವಶಕ್ಕೆ ಪಡೆಯಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net