2000 ಅಡಿ ಉದ್ದ ತ್ರಿವರ್ಣ ಧ್ವಜ ಮೆರವಣಿಗೆ

2000 ಅಡಿ ಉದ್ದ ತ್ರಿವರ್ಣ ಧ್ವಜ ಮೆರವಣಿಗೆ
Published on

ಹಾಸನ: ಹಾಸನದಲ್ಲಿ ಪ್ರಪ್ರಥಮವಾಗಿ 2000 ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ಬಾವುಟ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು, 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಈ ಬಾರಿ ವಿನೂತನವಾಗಿ ಹಮ್ಮಿಕೊಂಡಿರುವ ತ್ರಿವರ್ಣ ಧ್ವಜ ಮೆರವಣಿಗೆ ದೇಶ ಭಕ್ತಿ, ದೇಶ ಪ್ರೇಮ ಹಾಗೂ ದೇಶಾಭಿಮಾನ ಮೂಡಿಸುವಂತಹ ಪ್ರಯತ್ನದಲ್ಲಿ ಇದು ಒಂದು ಪ್ರಮುಖ ಪಾತ್ರವಹಿಸಿದೆ ಎಂದು ತಿಳಿಸಿದರು.
ಪ್ರಪ್ರಥಮವಾಗಿ 2000 ಅಡಿಗಳ ಧ್ವಜವನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪೆರೇಡ್ ಮೈದಾನದವರೆಗೂ ನಗರದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಇತರರು ಹಿಡಿದು ಸಾಗಿದರು.
ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net