ಬಳ್ಳಾರಿ : ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಏ.16 ಮತ್ತು 17 ರವರೆಗೆ ಸಾಮಾನ್ಯ ಪ್ರವೇಶ (ಸಿಇಟಿ-2025) ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------