

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಇನ್‌ಫೋಸಿಸ್‌ನ ಸಹಸಂಸ್ಥಾಪಕ ನಾರಾಯಣಮೂರ್ತಿ ದಂಪತಿ ಶುಕ್ರವಾರ ಮತದಾನ ಮಾಡಿದರು.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾರಾಯಣಮೂರ್ತಿ ಡಿಸ್ಚಾರ್ಜ್ ಆಗಿ ಪತ್ನಿ ಸುಧಾಮೂರ್ತಿ ಅವರೊಂದಿಗೆ ನೇರವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ನಾರಾಯಣಮೂರ್ತಿ ಅವರ ಈ ಕಾರ್ಯಕ್ಕೆ ಚುನಾವಣಾ ಆಯೋಗ ಪ್ರಶಂಸೆ ವ್ಯಕ್ತಪಡಿಸಿದೆ.
ಈ ವೇಳೆ ಸುಧಾಮೂರ್ತಿ ಮಾತನಾಡಿ, ಐದು ವರ್ಷಗಳಲ್ಲಿ ಒಂದು ಬಾರಿ ಮಾತ್ರ ನಮಗೆ ನಮ್ಮ ಹಕ್ಕು ಚಲಾಯಿಸಲು ಅವಕಾಶ ದೊರೆಯುತ್ತದೆ. ಅದನ್ನು ಬಳಸಿಕೊಂಡು ಸೂಕ್ತ ನಾಯಕನನ್ನು ಆಯ್ಕೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ತಪ್ಪದೆ ಮತ ಹಾಕುವ ಮೂಲಕ ತಮ್ಮ ಹಕ್ಕು ಚಲಾಯಿಸಿ ಎಂದರು.