20ರಂದು ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

Published on

ಚನ್ನರಾಯಪಟ್ಟಣ: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಒಕ್ಕಲಿಗರ ಸಂಘದಿಂದ ಜು.20ರಂದು ಬಿಜಿಎಸ್ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಎ.ವಿ.ಜಯಪಾಲ್ ತಿಳಿಸಿದರು.

ಸಮುದಾಯದಲ್ಲಿನ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೆಲಸ ಹಾಗೂ ಈ ಮಕ್ಕಳ ಸಾಧನೆ ಇತರ ಮಕ್ಕಳಿಗೂ ಪ್ರೇರಣೆಯಾಗಲಿ ಎಂಬ ಕಾರಣಕ್ಕೆ 6 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡು ಬರಲಾಗುತ್ತಿದೆ. ಅದರಂತೆ ಈ ಬಾರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2024-2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕೂ ಹೆಚ್ಚು ಅಂಕಗಳಿಸಿದ ಮಕ್ಕಳು ಜು.16ರ ರೊಳಗೆ ತಾಲೂಕು ಒಕ್ಕಲಿಗರ ಸಂಘದ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಂಕಪಟ್ಟಿಯೊಂದಿಗೆ ಟಿ.ಸಿ.ನಕಲು ಪ್ರತಿಯೊಂದಿಗೆ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ತಾಲೂಕು ಗೌರವ ಅಧ್ಯಕ್ಷ ಜೆ.ಶಿವೇಗೌಡ, ಉಪಾಧ್ಯಕ್ಷ ಎಂ.ಆರ್.ಸತ್ಯಕುಮಾರ್, ಕಾರ್ಯದರ್ಶಿ ಬಿ.ಎನ್.ರವಿ, ಸಂಘಟನಾ ಕಾರ್ಯದರ್ಶಿ ಬಿ.ರಾಜೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net