20ರಂದು ಜೆಎಸ್‌ಎಸ್ ವಿವಿ 5ನೇ ಘಟಿಕೋತ್ಸವ

NAN_1197
Published on

ಮೈಸೂರು: ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವವನ್ನು ಮಾ.20ರಂದು ಸಂಜೆ 4ಕ್ಕೆ ಆಯೋಜಿಸಲಾಗಿದೆ.

ವಿವಿ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಪದಕ ಪ್ರದಾನ ಮಾಡುವರು. ಇಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ ಬೆಟಸೂರಮಠ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ಕುಲಪತಿ ಡಾ.ಎಂ.ಎನ್. ಸಂತೋಷ್ ಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಘಟಿಕೋತ್ಸವದಲ್ಲಿ 986 ಬಿಇ, 54 ಬಿಸಿಎ, 176 ಎಂಟೆಕ್, 103 ಎಂಸಿಎ, 47 ಎಂಎಸ್ಸಿ, 227 ಎಂಬಿಎ ಮತ್ತು 11 ಸಂಶೋಧನಾ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. 56 ವಿದ್ಯಾರ್ಥಿಗಳಿಗೆ ಪದಕ ವಿತರಿಸಲಾಗುತ್ತಿದ್ದು, ಇದರಲ್ಲಿ 34 ಪದಕಗಳನ್ನು ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು, 22 ದತ್ತಿ ಪದಕ ನೀಡಲಾಗುತ್ತಿದೆ ಎಂದು ಹೇಳಿದರು.

ವಿವಿ ಕುಲಸಚಿವ ಪ್ರೊ.ಎಸ್.ಎ.ಧನರಾಜ್, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಪಿ. ನಂಜುಂಡಸ್ವಾಮಿ, ಎಸ್ ಜೆಸಿಇ ಪ್ರಾಂಶುಪಾಲ ಡಾ.ಎಸ್.ಬಿ. ಕಿವಾಡೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net