20ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ

Vijayavani-Featured-Image
Published on

ವಿಜಯಪುರ: ನಗರದ ಕಂದಗಲ್ಲ ಹನುಮಂತರಾಯ ರಂಗ ಮಂದಿರದಲ್ಲಿ ಆ. 20 ರಂದು ಸಂಜೆ 5 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ನಡೆಯಲಿದೆ.

ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಯ ಸಹಯೋಗದಲ್ಲಿ ಜಯಂತಿ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಜಯಂತಿ ಕಾರ್ಯಕ್ರಮ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ, ವಿಪ ಸದಸ್ಯ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಪ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್​. ಪೂಜಾರಿ, ಪಾಲಿಕೆ ಮೇಯರ್​ ಮಹೇಜಬಿನ ಹೊರ್ತಿ, ಬಿಡಿಎ ಅಧ್ಯಕ್ಷ ಕನ್ನಾನ್​ ಮುಶ್ರೀಫ್​ ಭಾಗವಹಿಸುವರು.

ಕಾಶೀನಾಥ ಕೋಣೆನವರ ಉಪನ್ಯಾಸ ನೀಡಲಿದ್ದು, ಹರೀಶ ಹೆಗಡೆ ತಂಡದಿಂದ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಅಂದು ಸಂಜೆ 4 ಕ್ಕೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ರಂಗಮಂದಿರವರೆಗೆ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆಯು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net