20ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಕೃಷಿ ಮೇಳ

WEB TYR
Published on

ತ್ಯಾಗರ್ತಿ: ಆರೋಗ್ಯಯುತ ಜೀವನಕ್ಕೆ ಸಿರಿಧಾನ್ಯ ಹಾಗೂ ಸಾವಯವ ಉತ್ಪನ್ನಗಳನ್ನು ರೈತರು ಬೆಳೆಯಬೇಕು ಮತ್ತು ನಿತ್ಯ ಆಹಾರ ತಯಾರಿಕೆಯಲ್ಲಿ ಬಳಸಬೇಕು ಎಂದು ಕೃಷಿ ಅಧಿಕಾರಿ ಶಿವಪ್ರಕಾಶ್ ಹೇಳಿದರು.

ಸಮೀಪದ ಹಿರೇಬಿಲಗುಂಜಿ ಗ್ರಾಪಂ ಆವರಣದಲ್ಲಿ ಸೋಮವಾರ ಕೃಷಿ ಇಲಾಖೆ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನದ ಕುರಿತು ಆಯೋಜಿಸಿದ್ದ ಪ್ರಚಾರ ಅಭಿಯಾನದಲ್ಲಿ ಮಾಹಿತಿ ನೀಡಿದ, ರೈತರು ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಬಳಸಿಕೊಂಡು ತಮ್ಮ ಬೆಳೆಯ ಮೌಲ್ಯವನ್ನು ವೃದ್ಧಿಸಿಕೊಳ್ಳಬೇಕು. ಸಾವಯವ ಉತ್ಪನ್ನ ಹಾಗೂ ಸಿರಿಧಾನ್ಯಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬೇಡಿಕೆ ಇದೆ. ಈ ಬೇಡಿಕೆ ಪೂರೈಸಲು ರೈತರು ಕೃಷಿ ಕ್ಷೇತ್ರದಲ್ಲಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಜ.20ರಿಂದ 22ರ ವರೆಗೆ ಮೂರು ದಿನಗಳ ಕಾಲ ನೆಡೆಯುವ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಲ್ಲಿ ರೈತರು ಭಾಗವಹಿಸಬೇಕು. ಇದರಿಂದ ಸಾಕಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net