21.43 ಲಕ್ಷ ರೂ. ವಂಚನೆ

cyber crime
Published on

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯ ಲಾಭದಾಸೆ ಮಾತಿಗೆ ಮರುಳಾದ ಮಹಿಳೆಯೊಬ್ಬರು ಬರೋಬ್ಬರಿ 21.43 ಲಕ್ಷ ರೂ. ವರ್ಗಾಯಿಸಿ ವಂಚನೆಗೊಳಗಾಗಿದ್ದರ ಕುರಿತು ಇಲ್ಲಿನ ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯು ಧಾರವಾಡದ ಮಹಿಳೆಗೆ ವಾಟ್ಸ್‌ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದು, ರಸೆಲ್ ಇನ್‌ವೆಸ್ಟ್‌ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾನೆ. ಸಣ್ಣ ವ್ಯಾಪಾರ ಮಾಡಲು ಸಹಾಯ ಮಾಡುವುದಾಗಿ ನಂಬಿಸಿದ್ದಾನೆ. ವಿವಿಧ ತೆರಿಗೆ ಪಾವತಿಸುವಂತೆ ಹಂತ ಹಂತವಾಗಿ ಒಟ್ಟು 21,43,765 ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ದೂರಿನಲ್ಲಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net