ಜೋರಾಯ್ತು ವರುಣನ ಅಬ್ಬರ, ತುಂಗಾ ಜಲಾಶಯದ 21 ಕ್ರಸ್ಟ್​ ಗೇಟ್​ ಓಪನ್

Tunga Dam
Published on

ಶಿವಮೊಗ್ಗ: ಕಳೆದ ಕೆಲ ದಿನಗಳಿಂದ ಮಲೆನಾಡಿನಲ್ಲಿ ಬಾರಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದ್ದು, ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಈ ಹಿನ್ನಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯದ 21 ಕ್ರಸ್ಟ್​ ಗೇಟ್​ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದೆ. ತುಂಗಾ ಜಲಾಶಯದಿಂದ 35,868 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಜಲಾವೃತಗೊಂಡಿದೆ.

ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸೋಮವಾರ ನೀಡುವ ರಜೆಯ ಬದಲಾಗಿ ಬೇರೊಂದು ಶಾಲೆ ನಡೆಸಿ ಸರಿದೂಗಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net