

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ಸಾರ್ವಜನಿಕ ಶ್ರೀ ಗಣಪತಿ ಸೇವಾ ಸಮಿತಿಯಿಂದ ಶ್ರೀ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಈಬಾರಿಯ ೮೮ನೇ ವರ್ಷದ ಗಣೇಶೋತ್ಸವವನ್ನು ೨೧ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಆರ್.ಕೇಶವಮೂರ್ತಿ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. ೭ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಬಸವನಹಳ್ಳಿಯ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಿಂದ ಗಣಪತಿ ಮೆರವಣಿಗೆಯನ್ನು ಪ್ರಾರಂಭಿಸಿ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿರುವ ಆಸ್ಥಾನ ಮಂಟಪದಲ್ಲಿ ಸಂಜೆ ೫ ಗಂಟೆಗೆ ಗಣಪತಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಗಣೇಶೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂರು ದಿನ ಹರಿಕಥೆ, ಮೂರುದಿನ ಸುಗಮ ಸಂಗೀತ, ಎರಡು ದಿನ ನೃತ್ಯ ರೂಪಕ, ಎರಡು ದಿನ ಜಾದು, ಆರು ದಿನ ಆರ್ಕೆಸ್ಟಾç, ಒಂದು ದಿನ ಜನಪದ ಕಾರ್ಯಕ್ರಮ, ಒಂದು ದಿನ ಡ್ಯಾನ್ಸ್ ಸೇರಿದಂತೆ ಒಟ್ಟು ೨೧ ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಜೆ ೭ ಗಂಟೆಯಿAದ ರಾತ್ರಿ ೧೦.೩೦ರವರೆಗೆ ನಡೆಯಲಿವೆ ಎಂದು ವಿವರಿಸಿದರು.
ಸೆ. ೧೮ರ ಬುಧವಾರ ಸಂಜೆ ೬ ಗಂಟೆಗೆ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ೨೧ ರಂದು ಶನಿವಾರ ಸಂಕಷ್ಠಹರ ಗಣಪತಿ ವಿಶೇಷ ಪೂಜೆ, ೨೨ರಂದು ಭಾನುವಾರ ಬೆಳಗ್ಗೆ ೧೧ ಗಂಟೆಗೆ ಗಣಹೋಮ, ಮಧ್ಯಾಹ್ನ ೧೨ ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸೆ.೨೮ ರಂದು ಶನಿವಾರ ಮಧ್ಯಾಹ್ನ ೩ ಗಂಟೆಗೆ ಶ್ರೀಗಣಪತಿಯನ್ನು ಭವ್ಯ ಅಲಂಕೃತ ಪ್ರಭಾವಳಿಯಲ್ಲಿ ಕುಳ್ಳಿರಿಸಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊAದಿಗೆ ನಾದಸ್ವರ, ಗೊಂಬೆ, ಡೊಳ್ಳು ಕುಣಿತ, ಹಳ್ಳಿ ವಾದ್ಯ ಇನ್ನೂ ಮುಂತಾದ ಜಾನಪದ ಕಲಾ ತಂಡಗಳೊAದಿಗೆ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯು ನಗರದ ಪ್ರಮುಖ ರಾಜಬೀದಿಯಲ್ಲಿ ಹಾಗೂ ಎಂಜಿ ರಸ್ತೆಯಲ್ಲಿ ಸಾಗಿ ಸೆ. ೨೯ರ ಭಾನುವಾರ ಬೆಳಗ್ಗೆ ೯.೩೦ಕ್ಕೆ ನಗರದ ಬಸವನಹಳ್ಳಿ ಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ನಗರದ ನಾಗರೀಕರು, ಭಕ್ತಾಧಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಎಸ್.ಕುಬೇರ, ಖಜಾಂಚಿ ಎಚ್.ಕೆ.ಮಂಜುನಾಥ್, ಕಾರ್ಯಾಧ್ಯಕ್ಷ ಈಶ್ವರಪ್ಪ.ಎನ್ ಕೋಟೆ, ಗೌರವಾಧ್ಯಕ್ಷ ಎಂ.ದಿವಾಕರ್, ಉಪಾಧ್ಯಕ್ಷ ಎಂ.ಎಸ್ ಉಮೇಶ್ ಕುಮಾರ್, ಕಾರ್ಯದರ್ಶಿ ಸಚಿನ್, ಸಿ.ಆರ್ ನಾಗೇಶ್ ಮತ್ತಿತರರಿದ್ದರು.