

ಮಡಿಕೇರಿ: ಜಿಲ್ಲೆಯಲ್ಲಿ ೨೧ ಕ್ಷಯಮುಕ್ತ ಗ್ರಾಮ ಪಂಚಾಯತಿ ಆಯ್ಕೆ ಮಾಡಿ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ಪತ್ರ ಪದಕವನ್ನು ನೆನಪಿನ ಕಾಣಿಕೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯ ರೋಗ ವಿಭಾಗ ಮಡಿಕೇರಿ ಕೊಡಗು ಜಿಲ್ಲೆ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಡಿ ಕ್ಷಯ ಮುಕ್ತ ಭಾರತ ೨೦೨೫ರ ಅಭಿಯಾನ ಸಂಬಂಧ ವಿಶ್ವ ಕ್ಷಯ ರೋಗ ದಿನಾಚರಣೆಯಲ್ಲಿ ಗೌರವಿಸಲಾಯಿತು.
ಜಿಲ್ಲೆಯಲ್ಲಿ ಬಲ್ಲಮಾವಟಿ, ಅಯ್ಯಂಗೇರಿ, ಕಾಕೋಟುಪರಂಬು ಒಟ್ಟು ೩ ಗ್ರಾಮ ಪಂಚಾಯಿತಿಗಳು ಬೆಳ್ಳಿಯ ಪದಕ ಪಡೆಯಿತು. ಮಡಿಕೇರಿ ತಾಲೂಕಿನ ಹಾಕತ್ತೂರು, ಮಕ್ಕಂದೂರು, ನಾಪೋಕ್ಲು, ಸಂಪಾಜೆ ಮತ್ತು ಎಮ್ಮೆಮಾಡು. ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕಿನ ವಾಲ್ನೂರು, ತ್ಯಾಗತ್ತೂರು, ಆಲೂರು ಸಿದ್ದಾಪುರ ಬೆಟ್ಟದಲ್ಲಿ, ಬ್ಯಾಡಗುಟ್ಟ, ಗರ್ವಾಲೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಕದನೂರು, ಪಾಲಿಬೆಟ್ಟ, ದೇವರಪುರ ಮತ್ತು ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ೧೮ ಕಂಚಿನ ಪದಕ ನೀಡಲಾಯಿತು. ಜತೆಗೆ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ಮತ್ತು ಪದಕ, ನೆನಪಿನ ಕಾಣಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ಡಾ.ಸನತ್ ಕುಮಾರ್, ಡಾ.ಲೋಕೇಶ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಪ್ರಮುಖರಾದ ರವೀಂದ್ರ ರೈ, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಇತರರಿದ್ದರು.
ಕಾರ್ಯಕ್ರಮ ಸಂಬಂಧ ವೈದ್ಯಕೀಯ ವಿದ್ಯಾರ್ಥಿಗಳು ರಂಗೋಲಿ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ನೀಡಲಾಯಿತು.