2,163 ಬಾಕಿ ಪ್ರಕರಣಗಳ ಇತ್ಯರ್ಥ

14 LNG 02
ಲಿಂಗಸುಗೂರು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನದ ಮೂಲಕ ದಂಪತಿಗಳು ಒಂದಾದರು. ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹಾಗೂ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶ ಅಂಬಣ್ಣ ಕೆ. ಹಾಗೂ ವಕೀಲರು ಮತ್ತು ನ್ಯಾಯಾಲಯ ಸಿಬ್ಬಂದಿ ಇದ್ದರು.
Published on

ಲಿಂಗಸುಗೂರು: ಪಟ್ಟಣದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಎರಡು ಕೌಟುಂಬಿಕ ಪ್ರಕರಣ ಸೇರಿ ಒಟ್ಟು 2,163 ಬಾಕಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹಾಗೂ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶ ಅಂಬಣ್ಣ ಕೆ. ಸೇರಿದಂತೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net