21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

DIP (4)--02
Published on


ಚಿತ್ರದುರ್ಗ: ಜಿಲ್ಲಾಡಳಿತ,ಜಿಪಂ,ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳಾಶ್ರಯದಲ್ಲಿ ಜೂನ್ 21ರಂದು ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿ ದರು.
ಡಿಸಿ ಕಚೇರಿಯಲ್ಲಿ ಈ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 7ರಿಂದ 7.45ರವರೆಗೆ ಸಾರ್ವಜ ನಿಕರು,ಯೋಗಾಸ್ತಕರು,ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಯೋಗ ಸಂಸ್ಥೆಗಳ ಮುಖ್ಯಸ್ಥರು ಅಗತ್ಯ ಕ್ರಮವಹಿಸಬೇಕೆಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ಎಸ್.ಜಗದೀಶ್ ಮಾತನಾಡಿ,ಅಂದು 900ಕ್ಕೂ ಹೆಚ್ಚು ಜನರು ಕಾರ‌್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 8 ಯೋಗ ಶಿಕ್ಷಕರು ಯೋಗಾಭ್ಯಾಸದ ಕುರಿತು ಪ್ರಾತ್ಯಕ್ಷಿಕೆ ನೀಡಲಿದ್ದಾರೆ ಎಂದರು.

ಯೋಗ ಜಾಗೃತಿ ಜಾಥಾ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಗರದಲ್ಲಿ ಜೂ.18ರಂದುಯೋಗ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 6.30ಕ್ಕೆ ಜಾಥಾ ಆರಂಭವಾಗುವ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ,ಮಾಧ್ಯಮಿಕ ಶಾಲಾ ಆವರಣದಲ್ಲಿ ಮುಕ್ತಾಯವಾಗಲಿದೆ. ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಭಾರತಿ ಆರ್.ಬಣಕಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net