21ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ

maduga meeting
Published on

ಎಚ್.ಡಿ.ಕೋಟೆ: ರಾಜ್ಯದಲ್ಲಿರುವ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಡಾ.ಬಾಬು ಜಗಜೀವನ ರಾಂ ವಿಚಾರ ವೇದಿಕೆ ಮಾಜಿ ಅಧ್ಯಕ್ಷ ಪಿ.ನಾಗರಾಜು ಮನವಿ ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸದಾಶಿವ ಆಯೋಗದ ವರದಿ ಜಾರಿ ಕುರಿತು ಆಯೋಜಿಸಿದ್ದ ಮಾದಿಗ ಸಂಘಟನೆಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸದಾಶಿವ ಆಯೋಗ ವರದಿ ಜಾರಿಗೆ ಸುಮಾರು 35 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗಿದೆ. ಆದರೂ ಯಾವುದೇ ಸರ್ಕಾರ ಜಾರಿಗೆ ಮುಂದಾಗುತ್ತಿಲ್ಲ. ಕಳೆದ ಎರಡು ಬಾರಿಯಿಂದಲೂ ಮಾದಿಗ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ನ್ಯಾಯಯುತ ಬೇಡಿಕೆಯಾದ ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಮಾ.21ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಕೋಟೆ ಮತ್ತು ಸರಗೂರು ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

ಹೀರಳ್ಳಿ ಪ್ರಕಾಶ್, ಕೃಷ್ಣಾಪುರ ಶಿವಯ್ಯ, ಬೂದನೂರು ವೆಂಕಟೇಶ್, ಕುರ್ಣೇಗಾಲ ಬೆಟ್ಟಸ್ವಾಮಿ, ಎಡತೊರೆ ನಾಗರಾಜ್, ಎಡತೊರೆ ಚೆಲುವರಾಜು, ಬೂದನೂರು ಮಹಾದೇವ, ಮಾತಂಗ ಜನ ಜಾಗೃತಿ ವೇದಿಕೆ ಅಧ್ಯಕ್ಷ ಬೂದನೂರು ರವೀಶ್, ಉಪಾಧ್ಯಕ್ಷ ಗಿರಿಪ್ರಸಾದ್, ಕಾಳಪ್ಪಾಜಿ, ಸುಭಾಷ್, ಚನ್ನಪ್ಪ, ಸೋಮಣ್ಣ, ಚೇತನ್, ಸಿದ್ದರಾಜು, ಮಂಜು, ಧರ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net