

ಮಂಗಳೂರು: ಬೆಂಗಳೂರಿನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವ್ಯಕ್ತಿಯೊಬ್ಬ 22.11 ಲಕ್ಷ ರೂ. ವಂಚನೆ ಮಾಡಿರುವ ಕುರಿತಂತೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಬೆಂಗಳೂರಿನ ಕಂಪನಿಯೊಂದರಲ್ಲಿ ಎಚ್.ಆರ್. ವಿಭಾಗದಲ್ಲಿ ಪ್ರಸ್ತುತ ‘ವರ್ಕ್ ್ರಂ ಹೋಮ್ ಕೆಲಸ ಮಾಡಿಕೊಂಡಿದ್ದು, ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬೆಂಗಳೂರಿನ ಮೂಲದ ವಿನಯ್ ಕುಮಾರ್ ಯಾನೆ ವಿನಯ್ ದೇವರಾಜ್ ಎಂಬಾತನು ಬೆಂಗಳೂರಿನ ಕಂಪೆಯೊಂದರಲ್ಲಿ ಒಳ್ಳೆಯ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾನೆ.
ಅದರಂತೆ ಆತನು ೆ.20ರಿಂದ ಎ.9ರ ವರೆಗೆ ಹಂತ ಹಂತವಾಗಿ ಸುಮಾರು 22,11,477 ರೂ. ವಿವಿಧ ಬ್ಯಾಂಕ್‌ಗಳ ಖಾತೆಗಳಿಗೆ ಜಮಾ ಮಾಡಿಸಿಕೊಂಡಿದ್ದಾನೆ. ಇನ್ನೂ ಹೆಚ್ಚಿನ ಹಣದ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ತನ್ನ ಹಣವನ್ನು ವಾಪಸು ನೀಡುವಂತೆ ಕೇಳಿದ್ದು, ಈವರೆಗೆ ಹಣ ನೀಡದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.