

ಧಾರವಾಡ: ಜಿಲ್ಲೆಯಲ್ಲಿ ಬುಧವಾರ 226 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 13563ಕ್ಕೇರಿದೆ. ಈವರೆಗೆ 10814 ಜನ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 2359 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 389 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಬುಧವಾರ ಪ್ರಕಟಗೊಂಡ ಪ್ರಯೋಗಾಲಯ ವರದಿಯಲ್ಲಿ ಧಾರವಾಡ ಶಹರ ಹಾಗೂ ಗ್ರಾಮೀಣ ಸೇರಿ ಅಂದಾಜು 40 ಪ್ರದೇಶಗಳಲ್ಲಿ ಪ್ರಕರಣಗಳು ಪತ್ತೆಯಾಗಿದ್ದರೆ, ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ಸೇರಿ ಅಂದಾಜು 60 ಪ್ರದೇಶಗಳಲ್ಲಿ ಪ್ರಕರಣಗಳು ಪತ್ತೆಯಾಗಿವೆ.
ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ, ಜುಂಜನಬೈಲ್, ಜಿ.ಬಸನಕೊಪ್ಪ, ಎಮ್ಮೆಟ್ಟಿ; ನವಲಗುಂದದ ನಾಯಕನೂರ ತಳವಾರ ಓಣಿ; ಕುಂದಗೋಳದ ಇಂಗಳಹಳ್ಳಿ ಮಠದ ಓಣಿ, ಕಿಲ್ಲಾ ಓಣಿ, ಸಂಶಿಯಲ್ಲಿ ಪ್ರಕರಣಗಳು ಪತ್ತೆಯಾಗಿವೆ. ಗದಗ, ಬಾಗಲಕೋಟೆ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನ ಜನರು ಧಾರವಾಡ ಜಿಲ್ಲೆಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.